Surprise Me!

ಪ್ರಿಯಾಂಕಾ ಖರ್ಗೆ ಸಂಪೂರ್ಣ ಪರಿಚಯ

2025-09-02 2 Dailymotion

ಪ್ರಿಯಾಂಕ್ ಖರ್ಗೆ, 22 ನವೆಂಬರ್ 1978ರಂದು ಗುಲ್ಬರ್ಗದಲ್ಲಿ ಜನಿಸಿದರು. ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯ ಪುತ್ರ. ತಾಯಿ ರಾಧಾಬಾಯಿ ಖರ್ಗೆ. ಪತ್ನಿ ಶ್ರುತಿ ಪಿ. ಖರ್ಗೆ.

1998ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಅವರು, 2013ರಲ್ಲಿ ಮೊದಲ ಬಾರಿಗೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಪ್ರಗತಿಶೀಲ ಚಿಂತನೆ ಮತ್ತು ತಂತ್ರಜ್ಞಾನಾಭಿವೃದ್ಧಿಯಲ್ಲಿ ಆಸಕ್ತಿ ಹೊಂದಿರುವ ಅವರು, ಕರ್ನಾಟಕದಲ್ಲಿ ಯುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಚುರುಕಾಗಿ ಕೆಲಸ ಮಾಡುತ್ತಿರುವ ಪ್ರಿಯಾಂಕ್ ಖರ್ಗೆ, ರಾಜ್ಯ ರಾಜಕಾರಣದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ.